Share this news

ಅಜೆಕಾರು: ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಇವರ ಆಶ್ರಯದಲ್ಲಿ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ಬಾಂಧವರ ಪ್ರಥಮ ವರ್ಷದ ಕೆಸರ್ ಡ್ ಒಂಜಿ ದಿನ-2023 ಆಗಸ್ಟ್. 13 ಭಾನುವಾರದಂದು ಬೆಳಗ್ಗೆ 8 ಗಂಟೆಯಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆಯಲಿದೆ.

ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ಪಂದ್ಯಾಟಗಳಲ್ಲಿ ಮರ್ಣೆ ಗ್ರಾಮಸ್ಥರಿಗೆ ಮಾತ್ರ ಆಡಲು ಅವಕಾಶವಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

Leave a Reply

Your email address will not be published. Required fields are marked *