ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಕೆಇಎ ಯ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದ ರಮ್ಯಾ ಎಸ್. – ಬಿ.ಎಂ.ಆರ್.ಡಿ.ಎ. ಆಯುಕ್ತರಾಗಿ, ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದ ಎಂ.ಎಸ್. ದಿವಾಕರ್ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ,ಗದಗ ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದ ಡಾ. ಸುಶೀಲಾ ಬಿ. ಅವರನ್ನು ಯಾದಗಿರಿ ಜಿಲ್ಲಾಧಿಕಾರಿಯಾಗಿ,ವಿಜಯಪುರ ಜಿಲ್ಲಾಧಿಕಾರಿಯಾಗಿರುವವೆಂಕಟೇಶ್ ಟಿ. ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಹಾಗೂ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಆಡಳಿತ ನಿರ್ದೇಶಕಿಯಾಗಿರುವ ಐಎಎಸ್ ಅಧಿಕಾರಿ ಡಿ.ಭಾರತಿ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.