Share this news

ಉಜಿರೆ: ಉಜಿರೆಯಲ್ಲಿ ಅಖಿಲ ಕರ್ನಾಟಕ ಮಂಜುನಾಥ ಸ್ವಾಮಿ ಭಕ್ತವೃಂದ ಆಯೋಜಿಸಿದ್ದ ಬೃಹತ್ ಸಮಾವೇಶದ ವೇಳೆ ಆಗಮಿಸಿದ್ದ ಮೃತ ಸೌಜನ್ಯ ಅವರ ತಾಯಿ ಕುಸುಮಾವತಿ ಅವರಿಗೆ ವೇದಿಕೆಯೇರಲು ಅವಕಾಶ ನೀಡಿರಲಿಲ್ಲ. ಅಲ್ಲದೆ ಈ ಘಟನೆಯ ನಂತರ ಕುಸುಮಾವತಿಯವರು ಅಪರಿಚಿತ ವ್ಯಕ್ತಿಗಳು ತನ್ನ ಮೈಗೆ ಕೈ ಹಾಕಿ ಚೂಡಿದಾರದ ಶಾಲನ್ನು ಎಳೆದು ಮಾನಕ್ಕೆ ಕುಂದುಂಟು ಮಾಡಿರುವುದಲ್ಲದೆ ತನಗೆ ಮತ್ತು ತನ್ನ ಮಗನಿಗೆ ಹಲ್ಲೆಗೆ ಮುಂದಾಗಿದ್ದಾರೆಂದು ಆರೋಪಿಸಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ?:

ತನ್ನ ಮಗಳು ಕುಮಾರಿ ಸೌಜನ್ಯ ಸುಮಾರು 11 ವರ್ಷದ ಹಿಂದೆ ಅತ್ಯಾಚಾರಕ್ಕೊಳಗಾಗಿಗಿ ಹತ್ಯೆಯಾಗಿದ್ದು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ಹೋರಾಟ ನಡೆಸುತ್ತಿದ್ದು ಅದೇ ಉದ್ದೇಶದಿಂದ 4-8-2023 ರಂದು ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಆಗ್ರಹಿಸಿ ಸಭೆಗೆ ನನ್ನ ಕುಟುಂಬದೊಂದಿಗೆ ಬಂದಿದ್ದೆ .ಆಗ ವ್ಯಕ್ತಿಯೊಬ್ಬ ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ನಿಲ್ಲಿಸಿ ತಾನು ಧರಿಸಿದ ಚೂಡಿದಾರದ ಶಾಲನ್ನು ಹಿಡಿದಳೆದು ತನ್ನ ಮಾನಕ್ಕೆ ಕುಂದುಂಟು ಮಾಡಿದ್ದಲ್ಲದೆ ತನ್ನ ಮಗ ಜಯರಾಮನಿಗೂ ಹಲ್ಲೆ ಮಾಡಿರುವುದಾಗಿ ಆರೋಪಿಸಿ ದೂರು ನೀಡಿ ಆರೋಪಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *