Share this news

ಉಡುಪಿ: ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಕಾರು ಮತ್ತು ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದೆ. ಟಿಪ್ಪರ್ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ವಿಚಾರ ತಿಳಿಯುತ್ತಿದ್ದಂತೆ ಚಾಲಕ ಟಿಪ್ಪರ್ ವೇಗವನ್ನು ಮತ್ತಷ್ಟು ಹೆಚ್ಚಿಸಿದ್ದಾನೆ. ಆದರೆ ಕಾರು ಟಿಪ್ಪರ್ ಹಿಂಭಾಗದಲ್ಲಿ ಸಿಲುಕಿರುವ ವಿಚಾರ ಚಾಲಕನಿಗೆ ತಿಳಿದಿಲ್ಲ.

ಟಿಪ್ಪರ್ ಹಿಂಭಾಗಕ್ಕೆ ಕಾರು ಡಿಕ್ಕಿಯಾಗಿ ಕಾರನ್ನು ಎಳೆದೊಯ್ಯುತ್ತಿರುವುದನ್ನು ಕಂಡ ಸಾರ್ವಜನಿಕರು ಟಿಪ್ಪರ್ ನಿಲ್ಲಿಸಲು ಬೆನ್ನತ್ತಿದ್ದಾರೆ. ಆದರೆ ಹೊಡೆತ ಬೀಳಬಹುದೆಂಬ ಭಯದಿಂದ ಟಿಪ್ಪರ್ ಚಾಲಕ ನಿಲ್ಲಿಸದೆ ಕಾರನ್ನು ಕಿಲೋಮೀಟರ್ ದೂರದವರೆಗೆ ಎಳೆದೊಯ್ದಿದ್ದಾನೆ. ಕೊನೆಗೂ ರ್ವಜನಿಕರು ಟಿಪ್ಪರ್ ನಿಲ್ಲಿಸಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ ಸೇರಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಪ್ಪರನ್ನು ವಶಕ್ಕೆ ಪಡೆದ ಪಡುಬಿದ್ರಿ ಪೊಲೀಸರು, ಗಾಯಾಳುಗಳಿಂದ ಮಾಹಿತಿ ಪಡೆದು ಪ್ರಕರಣ ದಾಖಲಿಸಲು ನಿರ್ಧರಿಸಿದ್ದಾರೆ.

Leave a Reply

Your email address will not be published. Required fields are marked *