Share this news

ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾ ಕುಮಾರಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಅಧಿಕಾರ ಹಸ್ತಾಂತರಿಸಿದರು.

ಡಾ. ವಿದ್ಯಾಕುಮಾರಿ ಅವರು ಪ್ರಸ್ತುತ ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಈ ಹಿಂದೆ ಅವರು ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ವಿದ್ಯಾಕುಮಾರಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರು. 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಆಗಿದ್ದಾರೆ.

Leave a Reply

Your email address will not be published. Required fields are marked *