Share this news

ಉಡುಪಿ : ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಮನೀಶ್ ಕರ್ಬೀಕರ್ ಅವರು ಗುರುವಾರ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗ್ರಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.

ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಉಡುಪಿ ಎಸ್ಪಿ ಅಕ್ಷಯ ಮಚ್ಚೀಂದ್ರ ಹಾಕೆ, ಸಿಐಡಿ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.

ಎಡಿಜಿಪಿ ಅವರು ಅಧಿಕಾರಿಗಳಿಂದ ತನಿಖೆಯ ವಿವರಗಳನ್ನು ಪಡೆದು ಸಲಹೆ ಸೂಚನೆಗಳನ್ನು ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆ ಪ್ರಗತಿಯಲ್ಲಿದ್ದು ಎಫ್ ಎಸ್ ಎಲ್ ವರದಿಗೆ ಕಾಯುತ್ತಿದ್ದೇವೆ. ತನಿಖೆ ಪೂರ್ಣಗೊಂಡ ಬಳಿಕ ಚಾರ್ಜ್ ಶೀಟ್ ಸಲ್ಲಿಸುತ್ತೇವೆ ಎಂದು ತಿಳಿಸಿದರು .

ನಂತರ ವಿಡಿಯೋ ಚಿತ್ರೀಕರಣ ಘಟನೆ ನಡೆದ ಖಾಸಗಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

Leave a Reply

Your email address will not be published. Required fields are marked *