Share this news

ಕಾರ್ಕಳ :ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿಕೊಂಡ ಪೊಲೀಸರ ಕ್ರಮ ಖಂಡನೀಯ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣ ನಡೆದು ವಾರ ಕಳೆದರೂ ತಪ್ಪಿತಸ್ಥರ ವಿರುದ್ದ ಕ್ರಮ ಜರಗಿಸಲು ಸಾದ್ಯವಾಗದ ಕಾಂಗ್ರೆಸ್ ಗೆ ಹಿಂದೂ ಸಂಘಟನೆ ಮುಖಂಡರ ಮೇಲೆ ಇಪ್ಪತ್ತನಾಲ್ಕು ಗಂಟೆಯೊಳಗೆ ಪ್ರಕರಣ ದಾಖಲಿಸುವ ಉತ್ಸಾಹ ಬಂದಿದೆ.ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಪ್ರಚೋದನಾರಿ ಭಾಷಣ ಮಾಡಿದರೆಂದು ಆರೋಪ ಹೊರಿಸಿ ಸಂಘಟನೆಗಳ ಮುಖಂಡರ ಮೇಲೆಯೇ ಪ್ರಕರಣ ದಾಖಲಿಸಿದ್ದಾರೆ. ಇದು ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯ ಪರಮಾವಧಿ ನಡವಳಿಕೆಯಾಗಿದೆ,ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಹಿಂದೂಗಳ ಮೇಲೆ ಯಾಕಿಷ್ಟು ದ್ವೇಷ ಎಂದು ಸುನಿಲ್ ಕುಮಾರ್ ಕಾಂಗ್ರೆಸ್ ಹಾಗೂ ಪೊಲೀಸರ ವಿರುದ್ದ ಕಿಡಿಕಾರಿದ್ದಾರೆ

ಹಿಂದೂ ಸಂಘಟನೆ ಮೇಲೆ ಕಾಂಗ್ರೆಸ್ ಆರಂಭದಿAದಲೂ ದಬ್ಬಾಳಿಕೆ, ದಮನ ನೀತಿ ಅನುಸರಿಸುತ್ತಲೇ ಬಂದಿದೆ. ಆದರೆ ಹಿಂದೂ ಸಂಘಟನೆ ಇದೆಲ್ಲವನ್ನು ಎದುರಿಸುತ್ತಲೇ ಬಂದಿದೆ. ದಮನಿಸಿದಷ್ಟು ಮತ್ತೆ ಸಂಘಟಿತರಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಒಂದು ವರ್ಗವನ್ನು ಓಲೈಸಲು ಕಾಂಗ್ರೆಸ್ ಹಿಂದೂ ನಾಯಕರ ವಿರುದ್ದ ಪ್ರಕರಣ ದಾಖಲಿಸಿ ಹಿಂದೂ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಹಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ತಿದ್ದಿಕೊಳ್ಳದೆ ಇದ್ದರೆ ಅದಕ್ಕೆ ತಕ್ಕ ಉತ್ತರವನ್ನು ನೀಡಲು ಹಿಂದೂ ಕಾರ್ಯಕರ್ತರು ಸಿದ್ದರಿದ್ದಾರೆ ಎನ್ನುವುದನ್ನು ಕಾಂಗ್ರೆಸ್ ಇನ್ನಾದರೂ ಅರಿತು ಹಿಂದೂ ವಿರೋಧಿ ದ್ವೇಷದ ರಾಜಕಾರಣವನ್ನು ನಿಲ್ಲಿಸಬೇಕೆಂದು ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *