ಅಜೆಕಾರು: ಕಡ್ತಲ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನವನ್ನು ಆ.8 ರಂದು ಉದ್ಘಾಟಿಸಲಾಯಿತು.
ಕಡ್ತಲ ಪಂಚಾಯತ್ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್ ಕಾರ್ಯಕ್ರಮ ಉದ್ಘಾಟಿಸಿದರು. ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಿಕಾ ಕಿಣಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.