ಕಾರ್ಕಳ : ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ನ ಪ್ರಥಮ ಗ್ರಾಮ ಸಭೆಯು ಬುಧವಾರ ಜರುಗಿತು.
ಪಂಚಾಯತ್ ಅಧ್ಯಕ್ಷೆ ಮಾಲತಿ ಕುಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮದ ಅಭಿವೃದ್ಧಿಯಾಗಬೇಕಾದರೆ ಅದು ಕೇವಲ ಗ್ರಾಮ ಪಂಚಾಯಿತಿಯಿಂದ ಮಾತ್ರ ಸಾಧ್ಯವಿಲ್ಲ. ಎಲ್ಲಾ ಜನಪ್ರತಿನಿಧಿಗಳ, ಸಂಘ ಸಂಸ್ಥೆಗಳ ಹಾಗೂ ಗ್ರಾಮಸ್ಥರ ಸಹಕಾರವಿದ್ದಾಗ ಮಾತ್ರ ಆ ಗ್ರಾಮದ ಅಭಿವೃದ್ಧಿ ಸಾಧ್ಯ ಎಂದರು.
ಸಭೆಯಲ್ಲಿ ಗ್ರಾಮಸ್ಥರಾದ ಸುಭಾಷ್ ರವರು ರಸ್ತೆ ಅನುದಾನದ ಬಗ್ಗೆ ಪ್ರಶ್ನಿಸಿದಾಗ ಉಪಾಧ್ಯಕ್ಷ ಸತೀಶ್ ಪೂಜಾರಿ ಉತ್ತರಿಸಿ ಶೆಟ್ಟಿಬೆಟ್ಟು ರಸ್ತೆ ಸೇರಿ ಒಟ್ಟು 5 ರಸ್ತೆಗಳಿಗೆ ಶಾಸಕರು ಒಂದು ಕೋಟಿ ರೂ ಅನುದಾನ ಮಂಜೂರು ಮಾಡಿದ್ದು ಮುನಿಯಾಲು ಉಮೇಶ್ ಶೆಟ್ಟಿ ಅವರಿಗೆ ಟೆಂಡರ್ ಆದ ಬಗ್ಗೆ ತಿಳಿಸಿದರು.
ನೋಡಲ್ ಅಧಿಕಾರಿಯಾಗಿ ಅಧಿಕಾರಿಯಾಗಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸದಾನಂದ ನಾಯ್ಕ್ ಭಾಗವಹಿಸಿದ್ದರು. ಈ ಸಂದರ್ಭ ಕಡ್ತಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಕುಂದಾಪುರ ಕುರ್ಕಾಲ್ ಗ್ರಾಮ ಪಂಚಾಯಿತಿಗೆ ವರ್ಗಾವಣೆಗೊಂಡ ಸುದರ್ಶನ್ ಎಸ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.
ಸಭೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಜರಿದ್ದರು