ಹೆಬ್ರಿ :ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಹೆಬ್ರಿ ತಾಲೂಕು ಘಟಕ ಸಹಯೋಗದಲ್ಲಿ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಶ್ರೀಧರ ಪೈ ಮುನಿಯಾಲು ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕ.ಸಾ.ಪ ದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು.
ರಾಜ್ಯ ಎನ್ ಎಸ್.ಎಸ್ ನಿಕಟ ಪೂರ್ವ ಅಧ್ಯಕ್ಷರು ಮತ್ತು ಕರ್ನಾಟಕ ಸರಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರ್, ವರಂಗ ಗ್ರಾ.ಪಂ ಅಧ್ಯಕ್ಷರಾದ ಉಷಾ ಹೆಬ್ಬಾರ್, ಸ್ಥಳೀಯ ಉದ್ಯಮಿಗಳಾದ ದಿನೇಶ ಪೈ, ಗೋಪಿನಾಥ ಭಟ್, ಜಿ.ಪಂ ಮಾಜಿ ಸದಸ್ಯೆ ಜ್ಯೋತಿ ಹರೀಶ್ ಉಪಸ್ಥಿತರಿದ್ದರು.
ಕ.ಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪಿ.ವಿ ಆನಂದ ಸಾಲಿಗ್ರಾಮ ಆಶಯ ನುಡಿಗಳನ್ನು ಆಡಿದರು. ಕ.ಸಾ.ಪ ಪದಾಧಿಕಾರಿ ಪುಪ್ಪಾವತಿ ಹೆಬ್ರಿ ಪ್ರಾರ್ಥಿಸಿದರು.
ಕ.ಸಾ.ಪ ಹೆಬ್ರಿ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ಸ್ವಾಗತಿಸಿ ,ಜಿಲ್ಲಾ ಕ.ಸಾ.ಪ ಕೋಶಾಧ್ಯಕ್ಷರಾದ ಮನೋಹರ ಪಿ. ವಂದಿಸಿದರು. ಕ.ಸಾ.ಪ ಹೆಬ್ರಿ ಘಟಕದ ಗೌರವ ಕಾರ್ಯದರ್ಶಿ ಮಂಜುನಾಥ ಕೆ ಶಿವಪುರ ಕಾರ್ಯಕ್ರಮ ನಿರೂಪಿಸಿದರು.