Share this news

ಉಡುಪಿ : ಹಿಂದೂ ಕಾರ್ಯಕರ್ತರಿಗೆ, ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು, ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಉಡುಪಿಯಲ್ಲಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ನಡೆಸಿ ಅಪರ ಜಿಲ್ಲಾಧಿಕಾರಿಗಳಾದ ವೀಣಾ ಬಿ. ಎನ್. ಇವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ. ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ಮಾಡಿ, ಗೋವಿನ ಎಲಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಇದಕ್ಕೆಲ್ಲ ಸರಕಾರ ಕಡಿವಾಣ ಹಾಕಬೇಕೆಂದು ಆಗ್ರಹಿದರು.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ತನ್ನ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಮತ್ತು ಖಾಸಗಿ ಜಮೀನುಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಆ ಮೂಲಕ ದೇಶದಲ್ಲಿ 8 ಲಕ್ಷ ಎಕರೆ ಜಮೀನನ್ನು ಕಬಳಿಸಿದೆ. ಇದೊಂದು ದೊಡ್ಡ ‘ಲ್ಯಾಂಡ್ ಜಿಹಾದ್’ ಆಗಿದೆ. ಹಾಗಾಗಿ ಈ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅದರ ಅಧಿಕಾರವನ್ನು ನೀಡಬೇಕು. ದೇಶದಲ್ಲಿ ಸಮಾನ ನಾಗರಿಕ ಕಾನೂನು ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ಎಲ್ಲಾ ವಿಶೇಷ ಸೌಲಭ್ಯಗಳು, ಕಾನೂನುಗಳು, ಆಯೋಗಗಳು, ಮಂಡಳಿಗಳು, ಸರಕಾರಿ ಇಲಾಖೆಗಳನ್ನು ರದ್ದುಪಡಿಸಬೇಕು ಮತ್ತು ಎಲ್ಲರಿಗೂ ಸಮಾನ ನಡವಳಿಕೆ ಸಿಗುವಂತಾಗಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ವಕ್ಫ್ ಕಾನೂನು ವಿರುದ್ಧ ಪ್ರಬಲ ಚಳವಳಿ ನಡೆಸಬೇಕಾಗುತ್ತದೆ ಎಂದು ಸಮಿತಿ ಎಚ್ಚರಿಸಿದೆ.

ಈ ಸಂದರ್ಭದಲ್ಲಿ ಶ್ರೀ ರಾಮ ಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಜಯರಾಮ ಅಂಬೇಕಲ್, ಪ್ರಧಾನ ಕಾರ್ಯದರ್ಶಿ ಶರತ್ ಮಣಿಪಾಲ, ಭಾರತೀಯ ಜೈನ್ ಮಿಲನ್ ಸಂಘಟನೆಯ ಕಾರ್ಯಧ್ಯಕ್ಷ ಕೆ. ಪ್ರಸನ್ನ ಕುಮಾರ್, ಅಧ್ಯಕ್ಷೆ ದೀಪಾರಾಣಿ, ಕಾರ್ಯದರ್ಶಿ ಶ್ವೇತಾ, ಸದಸ್ಯರಾದ ಡಾ.ಆಕಾಶ ರಾಜ್, ಡಾ.ಮಾನಸ ಜೈನ್, ವೈ ಸುಧೀರ್ ಎರ್ಮಾಳು, ಹಿಂದೂ ಜನಜಾಗೃತಿ ಸಮಿತಿಯ ವಿಶ್ವನಾಥ ನಾಯಕ್, ರತೀಶ್ ಶೆಟ್ಟಿ ಹಾಗೂ ದೇವೇಂದ್ರ ಪ್ರಭು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *