ಮೂಡಬಿದಿರೆ: ತಾಲೂಕಿನ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಗೇರಪದವು ಎಂಬಲ್ಲಿ ಸುಮಾರು 18 ಲಕ್ಷ ಅನುದಾನದಲ್ಲಿ ಘನತ್ಯಾಜ್ಯ ಘಟಕ ಮತ್ತು ಸ್ವಚ್ಛತಾ ವಾಹನದ ಉದ್ಘಾಟನೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ನೆರವೇರಿಸಿ ಕಲ್ಲಮುಂಡ್ಕೂರು ಗ್ರಾಮ ಪಂಚಾಯತಿಯ ಆಡಳಿತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಶವ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಕಲ್ಯಾಣಿ, ಪಂಚಾಯತ್ ಸದಸ್ಯರು, ಗುತ್ತಿಗೆದಾರ ಅಭಿಲಾಶ್ ಕಟೀಲು, ಸುಂದರ ಶಾಂಭವಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಪಿಡಿಒ ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಶೇಖರ್ ಧನ್ಯವಾದವಿತ್ತರು.