ಕಾರ್ಕಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬAಧಿಸಿದAತೆ ಬುಧವಾರ (ಇಂದು) ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು ಕಾರ್ಕಳದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಕಾರ್ಕಳ ಕಾಂಗ್ರೆಸ್ ವಕ್ತಾರ ಶುಭದ್ ರಾವ್, ಕಾಂಗ್ರೆಸ್ ಮುಖಂಡರಾದ ಸುಧಾಕರ ಶೆಟ್ಟಿ ಸುಬೀತ್ ಎನ್,ಅರ್,ಶೇಖರ ಮಡಿವಾಳ, ಜಾರ್ಜ್ ಕ್ಯಾಸ್ಟಲಿನೋ,ವಿವೇಕಾನಂದ ಶೆಣೈ,ಆರೀಫ್ ಕಲ್ಲೊಟ್ಟೆ,ಮಾಲಿನಿ ರೈ, ಕಾಂತಿ ಶೆಟ್ಟಿ,ಪ್ರತಿಮಾ ರಾಣೆ,ಶೋಭಾ ಮುಂತಾದವರು ಉಪಸ್ಥಿತರಿದ್ದರು