ಕಾರ್ಕಳ : ಕಾರ್ಕಳ ತಾಲೂಕು ಮುಡಾರು ಗ್ರಾಮದ ಪಾಜಿನಡ್ಕ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾಜಿನಡ್ಕ ನಿವಾಸಿ ಮಹಾಬಲ ಪೂಜಾರಿ (78 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರು ಕೆಲ ವರ್ಷಗಳಿಂದ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ ಅಲ್ಲದೆ ಕಳೆದ ಒಂದೆರಡು ವರ್ಷಗಳಿಂದ ಕಾಯಿಲೆ ಉಲ್ಬಣಗೊಂಡು ನಡೆದಾಡಲು ಸಾಧ್ಯವಾಗದೆ ಮಾನಸಿಕವಾಗಿ ತುಂಬಾ ನೊಂದಿದ್ದರು. ಇದೇ ಕಾರಣಕ್ಕೆ ಮನನೊಂದು ಶನಿವಾರ ಸಂಜೆ ತಮ್ಮ ಮನೆಯ ಸಮೀಪವಿರುವ ಹಳೆಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.