Share this news

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಾಸದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ (45) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ಪ್ರಶಾಂತ್ ಈ ಹಿಂದೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಅಗಿದ್ದು ಕೆಲ ದಿನಗಳ ಹಿಂದಷ್ಟೇ ಕಾರ್ಕಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು,ಕರ್ತವ್ಯಕ್ಕೆ ಹಾಜರಾಗದೇ ರಜೆಯಲ್ಲಿದ್ದರು.
ಅವಿವಾಹಿತರಾಗಿದ್ದ ಪ್ರಶಾಂತ್ ಮಧುಮೇಹ ಹಾಗೂ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *