Share this news

ಕಾರ್ಕಳ : ಕಂಪೆನಿ ಸೆಕ್ರೆಟರಿ (ಸಿಎಸ್) ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ಮಂಜುನಾಥ ಭಟ್, ಶ್ರೀಯಾ ಕೆ ಎಸ್, ಶ್ರಾವ್ಯ ಭಟ್ ಎಸ್, ಪ್ರಣೀತಾ, ಧನುಷ್ ಡಿ ಡಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ.

ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಅನುಭವಿ ಉಪನ್ಯಾಸಕರ ತಂಡದೊAದಿಗೆ ಕಾರ್ಯ ಪ್ರವೃತ್ತವಾಗಿರುವ ಸಂಸ್ಥೆ ತನ್ನ ಮೊದಲ ದಿನಗಳಿಂದಲೂ ವಾಣಿಜ್ಯ ವಿಭಾಗದಲ್ಲಿ ಸಿ.ಎ, ಸಿ.ಎಸ್ ಮತ್ತು ಬ್ಯಾಂಕಿAಗ್ ಪರೀಕ್ಷೆಗಳಿಗೆ ವಿಶೇಷ ತರಗತಿ ಮತ್ತು ತರಬೇತಿ ನೀಡುತ್ತಾ ಬಂದಿದ್ದು ಅತ್ಯುತ್ತಮ ಫಲಿತಾಂಶವೂ ದಾಖಲಾಗಿರುವುದನ್ನು ಸ್ಮರಿಸಬಹುದಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಸಂಯೋಜಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *