ಕಾರ್ಕಳ : ಬೋಳ ಸುರೇಂದ್ರ ಕಾಮತ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೇತನಾ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ಟ್ರಸ್ಟ್ನ ನಿರ್ದೇಶಕರಾದ ರಾಹುಲ್ ಕಾಮತ್ ವಿತರಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಯೋಜನೆ ರೂಪಿಸಿ ಸಹಯೋಗ ನೀಡಿದ ಅಮ್ಮನ ನೆರವು ಸೇವಾ ಟ್ರಸ್ಟ್ ನ ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಿಸಿದ ಬೋಳ ಸುರೇಂದ್ರ ಕಾಮತ್ ಚಾರಿಟೇಬಲ್ ಟ್ರಸ್ಟ್ ಹಾಗೂ ಅಮ್ಮನ ನೆರವು ಸೇವಾ ಟ್ರಸ್ಟ್ಗೆ ಚೇತನಾ ವಿಶೇಷ ಶಾಲೆಯ ವತಿಯಿಂದ ಸಂಚಾಲಕರಾದ ರಘುನಾಥ್ ಶೆಟ್ಟಿ ಅಭಿನಂದನೆ ಸಲ್ಲಿಸಿದರು.
ಭಾರತೀ ಸೇವಾ ಮಂಡಳಿ ಟ್ರಸ್ಟಿನ ಕೋಶಾಧಿಕಾರಿ ವಿಜಯ್ ಕುಮಾರ್ ಹಾಗೂ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಹಾಜರಿದ್ದರು. ಫಿಸಿಯೋಥೆರಪಿಸ್ಟ್ ಅಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.