ಕಿನ್ನಿಗೋಳಿ: ಭಾರತೀಯ ಸಂಸ್ಕೃತಿಯ ಎಲ್ಲಾ ಕಲೆಗಳಿಗ್ಗಿಂತ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವು ವಿಶೇಷಗಳಲ್ಲಿ ವಿಶಿಷ್ಟ ಕಲೆಯಾಗಿದೆ.
ಈ ಯಕ್ಷಗಾನ ಕಲೆಯಲ್ಲಿ ಲಯಬದ್ದವಾದ ಹಾಡುಗಾರಿಕೆ ವೇಷಗಾರಿಕೆಯಲ್ಲಿ ನೃತ್ಯ, ಸ್ಪಷ್ಟ ಉಚ್ಚಾರದ ಮಾತುಗಾರಿಕೆ ಹಾಗೂ ದೈಹಿಕ ವ್ಯಾಯಾಮವು ಒಳಗೊಂಡಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಅವರು ಕಿನ್ನಿಗೋಳಿ ಸಮೀಪದ ಕಮ್ಮಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಯಕ್ಷ ಶಿಕ್ಷಣ ಉಧ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಯಕ್ಷಗಾನ ಕಲಿಯಲು ನಾವು ತರಗತಿಗತಿಗಳನ್ನು ಹುಡುಕಿಕೊಂಡು ಹೋಗುವ ಪ್ರಸ್ತುತ ಸನ್ನಿವೇಶದಲ್ಲಿ ಶಾಲೆಗಳಿಗೆ ಬಂದು ಯಕ್ಷಗಾನವನ್ನು ಕಲಿಸಲು ಮುಂದೆ ಬಂದಿರುವ ಪಟ್ಲ ಸತೀಶ್ ಶೆಟ್ಟಿಯವರನ್ನು ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಯ ಅಭಿನಂದನಾರ್ಹ ಎಂದರು.
ಈ ಸಂದರ್ಭದಲ್ಲಿ ಯಕ್ಷಗಾನ ವಿದ್ವಾಂಸ ಡಾ. ಪ್ರಭಾಕರ ಜೋಷಿ, ಎಂ.ಎಲ್ ಸಾಮಗ, ಯಕ್ಷ ಶಿಕ್ಷಣದ ರೂವಾರಿ ಹಾಗೂ ಸಂಚಾಲಕ ಪಣಂಬೂರು ವಾಸು ಐತಾಳ್, ಯುಗಪುರುಷದ ಭುವನಾಭಿರಾಮ ಉಡುಪ, ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಶಾಲೆಯ ಪ್ರಿನ್ಸಿಪಾಲ್ ಪುಟ್ಟಸ್ವಾಮಿ ಉಪಸ್ಥಿತರಿದ್ದರು.
ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಚಿತ್ರಕಲಾ ಶಿಕ್ಷಕ ಭವನ್ ಪಿ.ಜಿ ಶಾಸಕ ಉಮಾನಾಥ ಕೋಟ್ಯಾನ್ ಅವರ ಚಿತ್ರ ಬಿಡಿಸಿದ್ದು ಅದನ್ನು ಶಾಸಕರಿಗೆ ಹಸ್ತಾಂತರಿಸಲಾಯಿತು. ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮುರಳೀಧರ್ ಜಿ.ಎನ್ ಸ್ವಾಗತಿಸಿ, ಶಿಕ್ಷಕ ಮಂಜುನಾಥ ಕೆ ಧನ್ಯವಾದ ಸಮರ್ಪಿಸಿದರು. ಶಿಕ್ಷಕ ಪ್ರವೀಣ್ ಪೂಜಾರಿ ನಿರೂಪಿಸಿದರು.