ಮೂಲ್ಕಿ : ಜಿಲ್ಲಾ ಪ್ರಶಸ್ತಿ ವಿಜೇತ, ಸಾಧನಾ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಂಘ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ,ಕ್ರೀಡಾ ಇಲಾಖೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ನಮ್ಮ ಗ್ರಾಮ ಡೆಂಗ್ಯೂ ಮಲೇರಿಯಾ ಮುಕ್ತ ಗ್ರಾಮ ಎಂಬ ಶೀರ್ಷಿಕೆಯಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರ್ ಕೆಮ್ರಾಲ್ ಇವರ ಮಾರ್ಗದರ್ಶನದಲ್ಲಿ ಮನೆ ಮನೆಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು.
ಕೆಮ್ರಾಲ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗೇಶ್ ಅಂಚನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮುದಾಯ ಆರೋಗ್ಯ ಅಧಿಕಾರಿ ಗಣೇಶ್ ಕುಂದಗೋಳ ಡೆಂಗ್ಯೂ, ಮಲೇರಿಯಾ ಹಾಗೂ ಚಿಕೂನ್ ಗುನ್ಯಾ ವೈರಸ್ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಮಂಜುಳ, ಆಶಾ ಕಾರ್ಯಕರ್ತರಾದ ಶ್ರೀಮತಿ ಶೋಭಾ, ಶ್ರೀಮತಿ ಹೇಮಾಲತಾ, ಮಂಡಳಿಯ ಗೌರವಾಧ್ಯಕ್ಷ ಧನಂಜಯ್ ಪಿ ಶೆಟ್ಟಿಗಾರ್, ಅಧ್ಯಕ್ಷ ಯತೀಶ್ ಬಂಗೇರ, ಕಾರ್ಯದರ್ಶಿ ಶರತ್ ಹಾಗೂ ಮಂಡಳಿಯ ಸದಸ್ಯರು ಭಾಗವಹಿಸಿದ್ದರು.