Share this news

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಮ್ಮಿಕೊಂಡಿರುವ ಹಾಗೂ ವಿಶ್ವವೇ ಎದುರು ನೋಡುತ್ತಿರುವ ಮಹತ್ವಾಕಾಂಕ್ಷಿ ಚಂದ್ರಯಾನ ಇಂದು ಸಾಕಾರಗೊಳ್ಳಲಿದೆ. ಚಂದ್ರಯಾನ-3 ವ್ಯೋಮನೌಕೆಯನ್ನು ಹೊತ್ತ ಎಲ್‌ವಿಎಂ-3 ರಾಕೆಟ್, ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿAದ ಇಂದು ಮಧ್ಯಾಹ್ನ 2.35ಕ್ಕೆ ನಭಕ್ಕೆ ನೆಗೆಯಲಿದೆ. ಇದು ಭಾರತದ 3ನೇ ಚಂದ್ರಯಾನವಾಗಿದೆ. ಇದಕ್ಕೆ ಸಂಬAಧಿಸಿದ 25.30 ಗಂಟೆಗಳ ಕೌಂಟ್‌ಡೌನ್ ಗುರುವಾರ ಮಧ್ಯಾಹ್ನವೇ ಆರಂಭವಾಗಿದೆ. ಸುಗಮ ಉಡ್ಡಯನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಂದ್ರನ ಮೇಲೆ ಸುರಕ್ಷಿತವಾಗಿ ಚಂದ್ರಯಾನ-3ದ ವಿಕ್ರಮ್ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸುವುದಕ್ಕೆ ಮೊದಲು ಆದ್ಯತೆ ನೀಡಲಾಗುತ್ತದೆ ಹಾಗೂ ನಂತರ ಚಂದ್ರನ ಮೇಲೆ ಪ್ರಗ್ಯಾನ್ ಹೆಸರಿನ ರೋವರ್ ಸುತ್ತಲಿದೆ ಹಾಗೂ ಇತ್ತೀಚಿನ ಪರಿಸ್ಥಿತಿ ಹಾಗೂ ತರಹೇವಾರಿ ಕುತೂಹಲಕರ ಮಾಹಿತಿಯನ್ನು ವಿಜ್ಞಾನಿಗಳಿಗೆ ನೀಡಲಿದೆ. ಈಗ ಅಂದುಕೊAಡಿರುವ ಪ್ರಕಾರ ಆ.23 ಅಥವಾ 24ರಂದು ಚಂದ್ರನ ಮೇಲೆ ವ್ಯೋಮನೌಕೆ ಲ್ಯಾಂಡ್ ಆಗಲಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಕೆಗೆ ಮೊದಲು ಆದ್ಯತೆ ನೀಡಲಾಗುತ್ತದೆ. ನೌಕೆ ಲ್ಯಾಂಡ್ ಆಗುವಲ್ಲಿ ವೈಪರೀತ್ಯಗಳ ಕಾರಣ ವ್ಯತ್ಯಾಸವಾದರೂ ಆದರೆ, ಪರ್ಯಾಯ ಮಾರ್ಗಗಳನ್ನು ಇಸ್ರೋ ಕಂಡುಕೊAಡಿದ್ದು, ಒಂದಿಲ್ಲೊAದು ಪರ್ಯಾಯ ಸ್ಥಳಗಳಲ್ಲಿ ನೌಕೆಯ ಭೂಸ್ಪರ್ಶಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ ಸಾಕಷ್ಟು ಇಂಧನ ವ್ಯವಸ್ಥೆಯನ್ನೂ ಲ್ಯಾಂಡರ್‌ಗೆ ಮಾಡಲಾಗಿದೆ. ಅದಕ್ಕೆಂದೇ ಮುಂಜಾಗ್ರತಾ ಕ್ರಮವಾಗಿ ವೈಫಲ್ಯ ಆಧರಿತ ವಿನ್ಯಾಸ ಮಾಡಲಾಗಿದೆ.

ಚಂದ್ರಯಾನ 3 ಯಶಸ್ವಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಗುರುವಾರ ತಿರುಪತಿಯ ವೆಂಕಟಾಚಲಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ವಿಜ್ಞಾನಿಗಳ ಈ ನಡೆಗೆ ಪ್ರಗತಿಪರ ಚಿಂತಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಆತ್ಮ ಸ್ಥೈರ್ಯ ಮತ್ತು ಸಂಶೋದನೆ ಬಗ್ಗೆ ಅನುಮಾನ ಮೂಡುತ್ತದೆ ಎಂದ ಸಾಹಿತಿಗಳು ತಂತ್ರಜ್ಞಾನ ಇಷ್ಟು ಮುಂದುವರೆದಿದ್ದರೂ ಧಾರ್ಮಿಕ ನಂಬಿಕೆ ಮೊರೆ ಹೋಗಿರುವುದಕ್ಕೆ ಆಕ್ರೋಶ ಹೊರಹಾಕಿದ್ದರಲ್ಲದೇ ವಿಜ್ಞಾನಿಗಳ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕು ತಪ್ಪಿಸುತ್ತದೆ ಎಂದಿದ್ದಾರೆ.

Leave a Reply

Your email address will not be published. Required fields are marked *