ವಾರಾಣಸಿ: ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಜುಲೈ 26ರವರೆಗೆ ಸಮೀಕ್ಷೆ ನಡೆಸದಂತೆ ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಲಾಗಿದೆ. ಬುಧವಾರ ಸಂಜೆ 5 ಗಂಟೆವರೆಗೆ ಮಸೀದಿ ಸರ್ವೆಗೆ ಸುಪ್ರೀಂ ತಡೆ ನೀಡಿದೆ. ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಮಸೀದಿ ಕಮಿಟಿಗೆ ಸೂಚನೆ ನೀಡಲಾಗಿದೆ.
ಜ್ಞಾನವಾಪಿ ಮಸೀದಿಯ ಜಿಪಿಆರ್ (ಗ್ರೌಂಡ್ ಪೆನೆಟೆರೇಟಿಂಗ್ ರಾಡಾರ್) ಸರ್ವೇ ನಡೆಸಲು ವಾರಾಣಾಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು. ಈ ಸಮೀಕ್ಷೆಯ ಮೂಲಕ ಈ ಮೊದಲು ಇದರ ನಿರ್ಮಾಣ ವಿನ್ಯಾಸ ಏನಿತ್ತು. ಅದನ್ನು ಮರು ನಿರ್ಮಾಣ ಮಾಡಲಾಗಿದೆಯೇ ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ. ಆದರೆ ಈ ಸಮೀಕ್ಷೆಯಲ್ಲಿ ಹಿಂದೂಗಳು ಶಿವಲಿಂಗ ಎಂದು ವಾದಿಸುತ್ತಿರುವ ಪ್ರದೇಶವನ್ನು ಕೈಬಿಡುವಂತೆಯೂ ಕೋರ್ಚ್ ಸೂಚಿಸಿತ್ತು. ಇದರಂತೆ ಪುರಾತತ್ವ ಇಲಾಖೆ ಸಮೀಕ್ಷೆಗೆ ಇಂದು ಭಾರಿ ಭದ್ರತೆಯೊಂದಿಗೆ ಗ್ಯಾನವಾಪಿ ಮಸೀದಿಗೆ ಆಗಮಿಸಿತ್ತು.
ಆದರೆ ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮುಸ್ಲಿಮ್ ಸಮಿತಿ ಸರ್ವೆಗೆ ತಡೆಕೋರಲು ಮನವಿ ಮಾಡಿತ್ತು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 2 ದಿನಗಳ ಕಾಲ ಸರ್ವೆಗೆ ತಡೆ ನೀಡಿದೆ.