Share this news

ಬೆಂಗಳೂರು: ದಲಿತ ಯುವಕನನ್ನ ಬ್ರಿಗೇಡ್ ಹೆಸರಲ್ಲಿ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಮತ್ತೊಂದೆಡೆ ಕಾಂಗ್ರೆಸ್ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಇದರ ನಡುವೆ ಕಾಂಗ್ರೆಸ್ ಕೊಲೆಗಡುಕ ಸರ್ಕಾರ ಎಂದು ಜೆಡಿಸ್ ಸಿಡಿದೆದ್ದಿದೆ.

ಕಾಂಗ್ರೆಸ್ ವಿರುದ್ದ ಹೋರಾಟ ನಡೆಸಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ಗೂಂಡಾಗಿರಿ ತಾಂಡವಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಕಾಂಗ್ರೆಸ್ ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕ್ರೈಂ ರೇಟ್ ಜಾಸ್ತಿ ಆಗಿದೆ. ಕಲಬುರಗಿಯಲ್ಲಿ ರಕ್ಷಣೆ ಕೊಡುವ ಪೊಲೀಸ್ ಪೇದೆಯ ಕೊಲೆಯಾಗಿದೆ. ಚಿಕ್ಕೋಡಿಯಲ್ಲಿ ಜೈನ ಮುನಿಯ ಬರ್ಬರ ಹತ್ಯೆಯಾಗಿದೆ. ಮೈಸೂರಿನಲ್ಲಿ ಹಿಂದೂ ಯುವಕನ ಕಗ್ಗೊಲೆಯಾಗಿದೆ.

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪಾಕಿಸ್ತಾನ ಧ್ವಜಗಳು ಸಹ ಹಾರಾಡಿವೆ ಎಂದು ಸ್ವತ ಯತ್ನಾಳ್ ನಿನ್ನೆ ಸದನದಲ್ಲಿ ಪ್ರಸ್ತಾಪ ಮಾಡಿದ್ದರು. ಹೀಗಾಗಿ ಕಾನೂನು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಬಿಜೆಪಿ ರಣತಂತ್ರ ಹೆಣೆದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.

ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಸಂಚಾಲಕನ ಹತ್ಯೆ ವಿಚಾರಕ್ಕೆ ಸಂಬAಧಿಸಿ ದಲಿತ ಯುವಕನನ್ನ ಬ್ರಿಗೇಡ್ ಹೆಸರಲ್ಲಿ ದಾರಿ ತಪ್ಪಿಸಿ ಬಿಜೆಪಿ ಕಾರ್ಯಕರ್ತರಿಂದಲೇ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಅದ್ಯಾವುದೋ ಬ್ರಿಗೇಡ್ ಹೆಸರಲ್ಲಿ ದಲಿತ ಯುವಕನನ್ನು ದಾರಿ ತಪ್ಪಿಸಿ ಕೊಂದು ಹಾಕಿದ್ದಾರೆ ಬಿಜೆಪಿ ಕಾರ್ಯಕರ್ತರು. ದಲಿತರೆಂದರೆ ಬಿಜೆಪಿ ನಾಯಕರಿಗೆ ಯಾಕಿಷ್ಟು ಅಸಹನೆ ದಲಿತರಿಗೆ, ಹಿಂದುಳಿದ ವರ್ಗದ ಯುವಕರಿಗೆ ಬಿಜೆಪಿ ಕೇಸರಿ ಶಾಲು ಹೊದಿಸುವುದೇ ಕೊನೆಗೊಂದು ದಿನ ಬಿಳಿ ವಸ್ತ್ರ ಹೊದಿಸಲು. ಬಿಜೆಪಿಯ ಹತ್ಯಾ ರಾಜಕೀಯಕ್ಕೆ ದಲಿತ ಹಿಂದುಳಿದ ವರ್ಗದವರನ್ನೇ ಬಲಿ ಪಡೆಯುತ್ತಿರುವುದೇಕೆ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಆರೋಪ ಮಾಡಿದೆ.

ಬಿಜೆಪಿ ಬಳಿಕ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಸಮರ:
ಕಾಂಗ್ರೆಸ್ ಕೊಲೆಗಡುಕ ಸರ್ಕಾರ ಎಂದು ಜೆಡಿಎಸ್ ಆರೋಪಿಸಿದೆ. ಆರೋಪಿಗಳು ಮಹದೇವಪ್ಪ ಪುತ್ರ ಸುನಿಲ್ ಸಹಚರರೇ. ವೇಣುಗೋಪಾಲ್ ಹತ್ಯೆ ಆರೋಪಿಗಳು ಕಾಂಗ್ರೆಸ್ ಪಕ್ಷದವರೇ ಎಂದು ಸಚಿವ ಮಹದೇವಪ್ಪ ಪುತ್ರ, ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಹೊರ ಹಾಕಿದೆ. ಟಿ.ನರಸೀಪುರದಲ್ಲಿ ಇಂತಹ ಹೀನಾಯ ಕೃತ್ಯ ಮರುಕಳಿಸದಿರಲಿ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕರುನಾಡು ಎಂಬ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಸಮರ ಸಾರಿದೆ.

Leave a Reply

Your email address will not be published. Required fields are marked *