ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಮೂಡುಬಿದಿರೆ,ಹಾಗೂ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟ- 2023 ನಾಳೆ (ಆಗಸ್ಟ್ 5) ಬೆಳಿಗ್ಗೆ 10 ರಿಂದ ಮೂಡಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ .
ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಅಧ್ಯಕ್ಷತೆ ವಹಿಸಲಿದ್ದು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಲಿದ್ದಾರೆ.
ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್, ಮೂಡುಬಿದ್ರೆ ಪುರಸಭಾ ಸದಸ್ಯರಾದ ಸುಜಾತ, ಮೂಡಬಿದಿರೆ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಲಿಲ್ಲಿ ಪಾಯಸ್ ಹಾಗೂ ಮೂಡುಬಿದಿರೆ ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಎಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.