ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿಟ್ಟೆ ಬೆರ್ಮು ಅಡ್ಯಂತಾಯ ಕ್ರಾಸ್ ಬಳಿ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಸ್ಕೂಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರ ಆಸ್ಪತ್ರೆಗೆ ಸಾಗಿಸುವ ವೇಳೆಗೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಮಂಜುನಾಥ ಶೆಟ್ಟಿ (62 ವರ್ಷ) ಮೃತಪಟ್ಟವರು. ಅವರು ಸೋಮವಾರ ಸಂಜೆ 4.30ರ ವೇಳೆಗೆ ನಿಟ್ಟೆ ಬೆರ್ಮು ಅಡ್ಯಂತಾಯ ಕ್ರಾಸ್ ಬಳಿ ಹಾದು ಹೋಗಿರುವ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ನಿಟ್ಟೆ ಕೆಇಬಿ ಕಚೇರಿ ಕಡೆಗೆ ಸೂಚನೆ ನೀಡಿ ತಮ್ಮ ಸ್ಕೂಟರ್ ತಿರುಗಿಸಿದ್ದರು . ಆದರೆ ಹಿಂಬದಿಯಿಂದ ಬಂದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರಿಗೆ ನಿಟ್ಟೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿಮಧ್ಯೆ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.