ಕಾರ್ಕಳ : ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಇಬ್ಬರು ವ್ಯಕ್ತಿಗಳು ಮತಪಟ್ಟಿದ್ದಾರೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕಲಂಬಾಡಿ ಪದವು ಎಂಬಲ್ಲಿ ಹಠಾತ್ ಎದೆ ನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಲಂಬಾಡಿ ಪದವು ನಿವಾಸಿ ಉಮೇಶ್ (38 ವರ್ಷ) ಮೃತಪಟ್ಟವರು. ಉಮೇಶ್ ರವರು ಲೆಮೀನಾ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು ರಜೆ ಇದ್ದ ಕಾರಣ ಮನೆಯಲ್ಲಿಯೇ ಇದ್ದರು. ಸಂಜೆ 4 ಗಂಟೆಯ ವೇಳೆಗೆ ಏಕಾಏಕಿ ಎದೆ ನೋವಿನಿಂದ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃಪಟ್ಟಿದ್ದರು. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಇನ್ನೊಂದು ಪ್ರಕರಣದಲ್ಲಿ ಬೆಳ್ಮಣ್ ಗ್ರಾಮದ ಸೂಡ ಆಶ್ರಯ ಕಾಲನಿ ನಿವಾಸಿ ಶ್ರೀಮತಿ ನ್ಯಾನ್ಸಿ ಫೆರ್ನಾಂಡಿಸ್ (53 ವರ್ಷ) ಎಂಬವರು ವಿಪರೀತ ಹೊಟ್ಟೆ ನೋವಿನಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರಿಗೆ ಜು. 18ರಂದು ಮುಂಜಾನೆ ವೇಳೆಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದ್ದುಲ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಮಧ್ಯಾಹ್ನದ ವೇಳೆಗೆ ಮತಪಟ್ಟಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.