ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಇಂದು (ಜುಲೈ 19) ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಂಧಿತರಿAದ ಪಿಸ್ತೂಲ್, ಜೀವಂತ ಗುಂಡು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಡಿವಾಳದ ಎಫ್‌ಎಸ್‌ಎಲ್ ಆವರಣದ ಇಂಟ್ರಾಗೇಷನ್ ಸೆಲ್‌ನಲ್ಲಿ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಸ್ಫೋಟಕ ಅಂಶಗಳನ್ನು ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಸ್, ಹೋಟೆಲ್, ಬಸ್ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು ಎಂದು ವಿಚಾರಣೆ ವೇಳೆ ಶಂಕಿತ ಉಗ್ರರು ಮುಂದೆ ಬಾಯ್ಬಿಟ್ಟಿದ್ದಾರೆ. ಈ ಪ್ರಕರಣ ಸಂಬAಧ ಒಟ್ಟು 7 ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಯುಎಪಿಎ, 120 ಃ, ಶಸ್ತ್ರಾಸ್ತ್ರ ನಿಗ್ರಹ ಕಾಯ್ದೆ ಸೆಕ್ಷನ್ 122 ,121ಯಡಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪೊಲೀಸ್ ಕಮಿಷನರ್ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕೆಲವು ಪ್ರಮುಖ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ವಿಧ್ವಾಂಸಕ ಕೃತ್ಯ ಎಸಗಲು ಪ್ಲಾನ್ ಮಾಡಿದ್ದವರನ್ನು ಬಂಧಿಸಿ ಅವರ ಪ್ಲ್ಯಾನ್ ವಿಫಲಗೊಳಿಸಲಾಗಿದೆ. ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಐದು ಜನರ ಮನೆ ಮೇಲೆ ದಾಳಿ ಮಾಡಲಾಗಿದ್ದು, ಏಳು ಪಿಸ್ತೂಲ್ 45 ಗುಂಡು, ಹನ್ನೆರಡು ಮೊಬೈಲ್ ಫೋನ್, ಡ್ರ‍್ಯ್ಯಾಗರ್, ವಾಕಿ ಟಾಕಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರು ಬೆಂಗಳೂರು ನಗರದಲ್ಲಿ ಕೃತ್ಯವೆಸಗಲು ಪ್ಲ್ಯಾನ್‌ಮಾಡಿದ್ದರು. ವಿದೇಶದಿಂದ ವಿಧ್ವಂಸಕ ಕೃತ್ಯಕ್ಕೆ ವಿದೇಶದಿಂದ ಫಂಡಿAಗ್ ಆಗುತ್ತಿತ್ತು ಎಂದು ಮಾಹಿತಿ ನೀಡಿದರು.
2008ರಲ್ಲಿ ನಡೆದಿದ್ದ ಸೀರಿಯಲ್ ಸ್ಫೋಟ ಆರೋಪಿ ನಸೀರ್ ಸಂಚು ರೂಪಿಸಿದ್ದ. ಟಿ.ನಸೀರ್ ಹಾಗೂ ಜುನೈದ್ ಈ ಪ್ರಕರಣದ ಮಾಸ್ಟರ್ ಮೈಂಡ್‌ಗಳಾಗಿದ್ದು, ಸದ್ಯ ಟಿ.ನಸೀರ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. 2008 ರ ಸೀರಿಯಲ್ ಬ್ಲಾಸ್ಟ್ ಕೇಸ್ ನ ಅರೋಪಿ ಟಿ ನಜೀರ್ ಎಲ್ ಇ ಟಿ ಸಂಘಟನೆಗೆ ಸೇರಿದ್ದವನು. ಈ ಶಂಕಿತರ ಉಗ್ರರು ಕೃತ್ಯವೆಸಗಲು ವಿದೇಶದಿಂದ ಹಣ ಬಂದಿದೆ. ಆರೋಪಿಗಳಿಗೆ ಆನ್‌ಲೈನ್ ಹಾಗೂ ನಗದು ರೂಪದಲ್ಲಿ ಹಣ ಪೂರೈಕೆಯಾಗಿದೆ. ಈ ಬಗ್ಗೆ ಐವರು ಆರೋಪಿಗಳನ್ನು 15 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.
2017 ರಲ್ಲಿ ವ್ಯವಹಾರದ ಕಾರಣಕ್ಕೆ ಕೊಲೆ ನಡೆದಿತ್ತು.ಈ ಪ್ರಕರಣದಲ್ಲಿ 21 ಜನ ಜೈಲಿಗೆ ಹೋಗಿದ್ದರು. ಹದಿನೆಂಟು ತಿಂಗಳ ಕಾಲ ಜೈಲಿನಲ್ಲಿ ಇದ್ದರು. ಜೈಲಿನಲ್ಲಿದ್ದಾಗ ಉಗ್ರರ ಸಂಪರ್ಕ ಬೆಳೆಸಿ ಬೆಂಗಳೂರಿನಲ್ಲಿ ಬ್ಲಾಸ್ಟ್ ಮಾಡಬೇಕು ಎಂದು ಪ್ಲಾನ್ ಮಾಡಿದ್ದರು. 2020 ರಲ್ಲಿ ಜುನೈದ್ ರಕ್ತ ಚಂದನ ಕೇಸ್ ನಲ್ಲಿ ಐದು ತಿಂಗಳ ಕಾಲ ಜೈಲಿನಲ್ಲಿದ್ದ.
ಜುನೈದ್ ವಿದೇಶದಲ್ಲಿ ಇದ್ದಾನೆ. ಆತನಿಂದಲೇ ಇವರುಗಳಿಗೆ ಏನು ಮಾಡಬೇಕು ಎಂದು ಮಾಹಿತಿ ನೀಡುತ್ತಿದ್ದ ಎಂದು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟರು.