Share this news

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತ ಉಗ್ರರಿಗೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಸೇರಿದಂತೆ ಇನ್ನೂ ಹಲವರೊಂದಿಗೆ ಸಂಪರ್ಕವಿರುವುದು ತನಿಖೆಯ ವೇಳೆ ಬಯಲಾಗಿದೆ.. ಹೀಗಾಗಿ ಇವರ ಸಂಪರ್ಕ ಜಾಲ ಭೇದಿಸುವ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಐವರು ಶಂಕಿತರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ಕೇಂದ್ರೀಯ ತನಿಖಾ ಸಂಸ್ಥೆಗಳ ಹಾಗೂ ಇತರೆ ರಾಜ್ಯಗಳ ಪೊಲೀಸರೊಂದಿಗೆ ಸಿಸಿಬಿ ಪೊಲೀಸರು ಸಂಪರ್ಕದಲ್ಲಿದ್ದಾರೆ. ಅಲ್ಲಿನ ಘಟನೆಗಳ ಬಗ್ಗೆ ಮಾಹಿತಿ ಪಡೆದು ಸಮಗ್ರವಾಗಿ ತನಿಖೆ ಮಾಡುತ್ತಿದ್ದಾರೆ ಎಂದರು.

ಶAಕಿತ ಉಗ್ರರ ಮನೆಗಳಲ್ಲಿ ಸಿಕ್ಕ ಸ್ಫೋಟಕಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಶೀಘ್ರದಲ್ಲೇ ವರದಿ ಕೈ ಸೇರಲಿದೆ. ಬಂಧಿತ ಶಂಕಿತ ಉಗ್ರರು ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸಂಪರ್ಕಕ್ಕೆ ಇರುವ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. ಈ ನಿಟ್ಟಿನಲ್ಲಿ ಯಾವುದೇ ವದಂತಿ ಹಬ್ಬಿಸಬಾರದು. ಶಂಕಿತರು ಯಾವ ಸ್ಥಳಗಳಲ್ಲಿ ಸ್ಫೊಟಕ್ಕೆ ಸಂಚು ರೂಪಿಸಿದ್ದರು ಎಂಬ ಮಾಹಿತಿಯನ್ನು ಭದ್ರತೆ ದೃಷ್ಟಿಯಿಂದ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *