Share this news

ದಾವಣಗೆರೆ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಫಯಾಜ್ ಉಲ್ಲಾ(3)) ಬಂಧಿತ ವ್ಯಕ್ತಿ. ಬೆಂಗಳೂರಿನ ಸಿಸಿಬಿ ಪೊಲೀಶರು ಇಂದು ಬೆಳಗ್ಗೆ ದಾವಣಗೆರೆಯಲ್ಲಿ ಫಯಾಜ್‌ನನ್ನು ಬಂಧಿಸಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿದ್ದ ಶಂಕಿತರ ಉಗ್ರರಿಗೆ ದಾವಣಗೆರೆಯ ಲಿಂಕ್ ಇತ್ತಾ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಸಿಸಿಬಿ ವಶದಲ್ಲಿರುವ ದಾವಣಗೆರೆ ಅಜಾದ್ ನಗರದ ನಿವಾಸಿ ಫಯಾಜ್ ವುಲ್ಲಾನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಈ ಹಿಂದೆ ಬೆಂಗಳೂರಿನಲ್ಲಿ ಅಕ್ರಮವಾಗಿ ಆಯುಧ ಮಾರಾಟ ವಿಚಾರವಾಗಿ ಇತನ ಮೇಲೆ ಐದು ಪ್ರಕರಣ ದಾಖಲಾಗಿದ್ದವು. ಜಾಮೀನು ಮೇಲೆ ಹೊರಗಿದ್ದ ಈತನನ್ನು ಮತ್ತೆ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಫಯಾಜ್ ವುಲ್ಲಾನನ್ನು ವಶಕ್ಕೆ ಪಡೆದಿದ್ದು, ಶಂಕಿತರಿಗೆ ಮತ್ತು ಫಯಾಜ್‌ಗೂ ಲಿಂಕ್ ಇತ್ತಾ ಎಂಬ ಅನುಮಾನ ಮೂಡಿದೆ.

ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಜುಲೈ 19 ರಂದು ಸಿಸಿಬಿ ಪೊಲೀಸರು ಬಂಧಿಸಿ ಅವರ ಬಳಿ ಇದ್ದ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ ಹಾಗೂ ಮೊಬೈಲ್ ಸಿಮ್ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆ ಮೂಲಕ ರಾಜಧಾನಿಯಲ್ಲಿ ನಡೆಯುತ್ತಿದ್ದ ಉಗ್ರರ ಪ್ಲಾನ್ ವಿಫಲಗೊಳಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದರು.

Leave a Reply

Your email address will not be published. Required fields are marked *