Share this news

ಬೆಂಗಳೂರು : ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ನಡೆದ ಜೈನ ಮುನಿಯ ಹತ್ಯೆ ಪ್ರಕರಣವನ್ನು ಸಿಐಡಿ ತನಿಕೆಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸಭೆಯಲ್ಲಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ಪ್ರಕರಣ ಅತಿ ಸೂಕ್ಷ್ಮವಾಗಿರುವುದರಿಂದ ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದರು .
ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ಹಾಗೂ ಕೆಲವು ಸಮುದಾಯಗಳ ಜೈನ ಮುನಿಗಳು ಸರ್ಕಾರಕ್ಕೆ ಒತ್ತಾಯಿಸಿದ್ದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ಜೈನಮುನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿ ಬಂಧಿತರನ್ನು ಜೈಲಿಗೆ ಶಿಫ್ಟ್ ಮಾಡಲಾಗಿದೆ.

Leave a Reply

Your email address will not be published. Required fields are marked *