Share this news

ಬೆಳಗಾವಿ : ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಮುನಿ ರಾಮಕುಮಾರ ನಂದಿ ಮಹಾರಾಜ ಅವರ ಕೊಲೆಯಲ್ಲಿ ಕೇವಲ ಒಬ್ಬನ ಕೈವಾಡ ಮಾತ್ರವಲ್ಲ. ಇದರ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಶಂಕೆ ಇದೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅಖಿಲ ಭಾರತೀಯ ಸಂತ ಸಮಿತಿ ರಾಜ್ಯ ಘಟಕದ ಅಧ್ಯಕ್ಷರಾದ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹಿಸಿದ್ದಾರೆ.

 

ಹಿರೆಕೋಡಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಆಶ್ರಮದ ನಿವಾಸಿಗಳಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ಜೈನಮುನಿ ಹತ್ಯೆ ಪ್ರಕರಣ ಇಡೀ ದೇಶಕ್ಕೆ ದುಃಖ ತಂದಿದೆ. ಹಿಂದೂ ಸನಾತನ ಧರ್ಮಕ್ಕೆ ಇದೊಂದು ದೊಡ್ಡ ಆಘಾತ. ಇದರ ಹಿಂದೆ ಇರುವವರು ಯಾರು ಎಂದು ಬಯಲಿಗೆಳೆಯಬೇಕಿದೆ. ಇದಕ್ಕಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಈಗಾಗಲೇ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದ್ದು ಶೀಘ್ರದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವರಿಕೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಮಠಗಳಿಗೆ ರಕ್ಷಣೆ ನೀಡಬೇಕಾದ ಜವಾಬ್ದಾರಿ ಸರ್ಕಾರದ್ದು. ಗುರುಗಳಿಗೇ ರಕ್ಷಣೆ ಇಲ್ಲವೆಂದರೆ ಸಂತರು ಏನು ಮಾಡಬೇಕು. ಸಂಜೆ ಆರು ಗಂಟೆಯ ಬಳಿಕ ಯಾವ ಸಂತರೂ ಹೊರಗೆ ಬರದಂತಹ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಕೇವಲ ಹಣದ ವಿಚಾರಕ್ಕೆ ಈ ಇಷ್ಟೊಂದು ಭೀಕರ ಹತ್ಯೆ ನಡೆದಿದೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲ. ಆಗಸ್ಟ್ 31ರೊಳಗೆ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಇಲ್ಲವಾದಲ್ಲಿ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದರು.

Leave a Reply

Your email address will not be published. Required fields are marked *