ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಬಸ್ರಿ ಎಂಬಲ್ಲಿ ಖಾಸಗಿ ಬಸ್ ಹಾಗು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬಸ್ ಚಾಲಕ ಗಾಯಗೊಂಡಿರುವ ಘಟನೆ ನಡೆದಿದೆ.
ಸೋಮವಾರ ಮುಂಜಾನೆ 10 ಗಂಟೆಗೆ ಉಡುಪಿಯಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸರ್ಕಾರಿ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ
ಅಪಘಾತದ ತೀವ್ರತೆಗೆ ಬಸ್ ಚಾಲಕನ ಕಾಲು ಜಖಂಗೊAಡಿದ್ದು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.