ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 24ರಂದು) ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶಿಸಿದ್ದಾರೆ.
ಪದವಿ,ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತರಗತಿಗಳು ಎಂದಿನಂತೆ ನಡೆಯಲಿವೆ.
ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು ಇನ್ನು ಎರಡು ಮೂರು ದಿನ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಅಲ್ಲದೆ ಭಾರೀ ಗಾಳಿ ಮಳೆಯಿಂದಾಗಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಭಾರೀ ಗಾತ್ರದ ಅಲೆಗಳು ಸೃಷ್ಟಿಯಾಗಿದ್ದು ಮೀನುಗಾರರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ