ಉಡುಪಿ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ಸಮುದ್ರಪಾಲಾಗಿದ್ದು, ಓರ್ವ ಯುವತಿ ಸಾವನ್ನಪ್ಪಿದ್ದು, ಮತ್ತೊರ್ವ ಯುವತಿಯನ್ನು ರಕ್ಷಿಸಲಾಗಿದೆ.
ಮಡಿಕೇರಿ ಮೂಲದ ಮಾನ್ಯ ಮೃತ ದುರ್ದೈವಿ. ಬದುಕುಳಿದ ಯಶಸ್ವಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆ ಮಡಿಕೇರಿಯಿಂದ ಈ ಹುಡುಗಿಯರು ನಾಪತ್ತೆಯಾಗಿದ್ದರು. ಈ ಕುರಿತು ಮಡಿಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಮಲ್ಪೆ ಬಳಿ ನಿನ್ನೆ(ಆ.6)ತಡರಾತ್ರಿ ಭಾರಿ ಅಲೆಗಳ ಹೊಡೆತಕ್ಕೆ ಇಬ್ಬರು ಯುವತಿಯರು ಸಮುದ್ರ ಪಾಲಾಗಿದ್ದರು. ಕೂಡಲೇ ಆಪತ್ಬಾಂಧವ ಸಿಬ್ಬಂದಿ ಈಶ್ವರ್ ಎಂಬುವವರು ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದು, ಮತ್ತೊರ್ವ ಯುವತಿ ಅಲೆಗಳ ಹೊಡೆತಕ್ಕೆ ಮೃತಪಟ್ಟಿದ್ದಾರೆ.