ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಎಂಬಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ವಿಟ ಪುರುಷರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ಐವರು ಯುವತಿಯರನ್ನು ರಕ್ಷಿಸಿದ್ದಾರೆ.
ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಹಠಾತ್ ದಾಳಿ ನಡೆಸಿ ಈ ದಂಧೆ ನಡೆಸುತ್ತಿದ್ದ ಅಬ್ದುಲ್ ಸಲಾಮತ್ ಹಾಗೂ ಚಂದ್ರಹಾಸ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.
ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟ ಬೆಂಗಳೂರು ಮೂಲದ ಮೂವರು ಯುವತಿಯರು ಹಾಗೂ ಇಬ್ಬರು ಮಹಾರಾಷ್ಟ್ರದ ನಾಸಿಕ್ ಹಾಗೂ ಮುಂಬೈ ವಾಸಿಗಳಾಗಿದ್ದಾರೆ. ಇದೇ ವೇಳೆ ಪೊಲೀಸರು 4 ಮೊಬೈಲ್ ಫೋನ್, 1 ಕಾರು , 2 ಮೋಟಾರ್ ಸೈಕಲ್ ಹಾಗೂ 10 ಸಾವಿರ ರೂಪಾಯಿಯನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಣಿಪಾಲ ಹಾಗೂ ಉಡುಪಿ ನಗರದ ಪ್ರದೇಶಗಳಲ್ಲಿ ಮಸಾಜ್ ಸೆಂಟರ್ ಹಾಗೂ ಬಾಡಿಗೆ ಮನೆಗಳಲ್ಲಿ ಇಂತಹ ದಂಧೆಗಳು ನಡೆಯುತ್ತಿವೆ ಎನ್ನುವ ಮಾತುಗಳು ಕೇಳಿಬಂದಿದ್ದು,ಅಮಾಯಕ ಯುವತಿಯರಿಗೆ ಆಮಿಷವೊಡ್ಡಿ ಈ ದಂಧೆಗೆ ಬಳಸಿಕೊಳ್ಳಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದಿವೆ.