Share this news

ನವದೆಹಲಿ: ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್‌ಐಆರ್‌ಗಳನ್ನು ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕಲಹ ಪೀಡಿತ ಮಣಿಪುರದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯ ಪೊಲೀಸರನ್ನು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನಂತರ ಅಂತಹ ಪ್ರಕರಣಗಳನ್ನು ಕೇಂದ್ರ ತನಿಖಾ ಸಂಸ್ಥೆಗೆ ವರ್ಗಾಯಿಸಲು ಮುಂದಾಗಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಎಫ್‌ಐಆರ್‌ಗಳನ್ನು ದಾಖಲಿಸುವಲ್ಲಿ, ಬಂಧನ ಮತ್ತು ಹೇಳಿಕೆಗಳನ್ನು ದಾಖಲಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಇದು ಮೇ ಆರಂಭದಿAದ ಜುಲೈ ಅಂತ್ಯದವರೆಗೆ ಇಲ್ಲಿ ಯಾವುದೇ ಕಾನೂನು ಇರಲಿಲ್ಲ ಎಂಬ ಭಾವನೆಯನ್ನು ಇದು ನ್ಯಾಯಾಲಯಕ್ಕೆ ನೀಡುತ್ತದೆ ಎಂದಿದೆ.

ನೀವು ಎಫ್‌ಐಆರ್ ದಾಖಲಿಸದೇ ಕಾನೂನು ವ್ಯವಸ್ಥೆಯನ್ನು ಸ್ಥಗಿತಗೊಳಿಸಿದ್ದೀರಿ. ಕಾನೂನು ಮತ್ತು ಸುವ್ಯವಸ್ಥೆ ಇಲ್ಲಿ ಸಂಪೂರ್ಣ ಹದಗೆಟ್ಟಿದೆ ಎಂಬ ಅಂಶವನ್ನು ಇದು ಸೂಚಿಸುವುದಿಲ್ಲವೇ ಎಂದು ಸಿಜೆಐ ಪ್ರಶ್ನಿಸಿದ್ದಾರೆ. ದಾಖಲಾದ ಎಲ್ಲಾ ಎಫ್‌ಐಆರ್‌ಗಳು, ಒಳಗೊಂಡಿರುವ ಅಪರಾಧಗಳ ಸ್ವರೂಪ ಮತ್ತು ಮಾಡಿದ ಬಂಧನಗಳ ಬಗ್ಗೆ ಡೇಟಾವನ್ನು ಒದಗಿಸುವಂತೆ ನ್ಯಾಯಪೀಠ ಮಣಿಪುರ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಿದೆ.

Leave a Reply

Your email address will not be published. Required fields are marked *