ಕಾರ್ಕಳ: ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಎಂಬಲ್ಲಿ ಮಂಗಳವಾರ ನಡೆದಿದೆ.
ಬಜಗೋಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೌಶಿಕ್(16) ಎಂಬಾತ ಕಾಲೇಜಿನಿಂದ ಮಧ್ಯಾಹ್ನ ಮನೆಗೆ ಬಂದವನು ಈ ಕೃತ್ಯ ಎಸಗಿದ್ದಾನೆ.
ತುಂಬಾ ಸಾಧು ಸ್ವಭಾವದ ಕೌಶಿಕ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಸ್ಥಳೀಯರ ಪ್ರಕಾರ ತಂದೆ ಗದರಿದ್ದಾರೆ ಎನ್ನುವ ಕಾರಣಕ್ಕಾಗಿ ನೊಂದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲಾ ಮಕ್ಕಳು ಇಂತಹ ಕೃತ್ಯಕ್ಕೆ ಇಳಿಯುತ್ತಿರುವುದು ಆತಂಕಕಾರಿ ವಿಚಾರವಾಗಿದೆ.ಬದುಕು ಎಂದರೆ ಏನು ಎನ್ನುವ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ನೀತಿಪಾಠದ ಬೋಧನೆಯ ಅಗತ್ಯತೆಯಿದ್ದು ಮಕ್ಕಳನ್ನು ಪ್ರಾಥಮಿಕ ಶಾಲಾ ಮಟ್ಟದಲ್ಲೇ ಜೀವನದ ಎದುರಾಗುವ ಸವಾಲುಗಳನ್ನು ಎದುರಿಸುವ ಮಾನಸಿಕ ದೃಢತೆಯನ್ನು ಗಟ್ಟಿಗೊಳಿಸುವ ಪ್ರಯತ್ನ ನಡೆಯಬೇಕಿದೆ