ಮೂಡಬಿದಿರೆ: ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ 2023 -24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು (ಜು.19) ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಎಕ್ಸ್ಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಲಿದ್ದು, ಶಾಸ್ತ್ರೀಯ ನೃತ್ಯಗಾರ್ತಿ ಹಾಗೂ ಚಲನಚಿತ್ರ ನಟಿ ಮಾನಸಿ ಸುಧೀರ್ ಉದ್ಘಾಟಿಸಲಿದ್ದಾರೆ. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಕ್ಷಿತಾ ಜೈನ್ ಉಪಸ್ಥಿತರಿರುವರು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.