ಮೂಡಬಿದಿರೆ: ಸುಳ್ಯ ತಾಲೂಕಿನ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಜರಗಿದ ಜಿಲ್ಲಾ ಮಟ್ಟದ 14ರ ವಯೋಮಿತಿಯ ಬಾಲಕಿಯರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಮಧುಮಿತ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ದಕ್ಷಿಣ ಕನ್ನಡದ ಏಳು ತಾಲೂಕುಗಳಿಂದ ಭಾಗವಹಿಸಿದ್ದ ಸ್ಪರ್ದಾಳುಗಳಲ್ಲಿ ಮಧುಮಿತ ಉತ್ಕçಷ್ಟ ಪ್ರದರ್ಶನವನ್ನು ನೀಡುವುದರ ಮೂಲಕ ಸಾಧನೆಯನ್ನು ಮಾಡಿದ್ದಾಳೆ. ವಿದಾರ್ಥಿನಿಯ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಇವರು ಅಭಿನಂದಿಸಿದ್ದಾರೆ. ಈಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಗೋಡು ಗ್ರಾಮದ ಶಿವಕುಮಾರ್ ಬಿ ಸವಿತ ದಂಪತಿಯ ಪುತ್ರಿಯಾಗಿದ್ದಾಳೆ.