ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಹಾಗೂ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಬಿಜೆಪಿ ವಿರುದ್ಧ ಮೌನ ಪ್ರತಿಭಟನೆ ನಡೆಸಲಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಸಚಿವರು ಹಾಗೂ ಶಾಸಕರುಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ