ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಯಗತಾಯ ಸೋಲಿಸಲೇಬೇಕು ಎನ್ನುವ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ನೇತೃತ್ವದ ಸುಮಾರು 40 ಕ್ಕೂ ಹೆಚ್ಚು ವಿರೋಧ ಪಕ್ಷಗಳು ನಾಳೆಯಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಹಾ ಮೈತ್ರಿಕೂಟದ ಸಭೆ ನಡೆಸಲಿವೆ.
ವಿರೋಧಪಕ್ಷಗಳ ಮಹಾ ಮೈತ್ರಿಕೂಟದ ಸಭೆಗೆ ದೇಶದಾದ್ಯಂತ ವಿವಿಧ ರಾಜ್ಯಗಳಿಂದ ರಾಜಕೀಯ ನಾಯಕರು ಭಾಗವಹಿಸಲಿದ್ದು ಈಗಾಗಲೇ ಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸುಸ್ತುವಾರಿ ಜಯವಾಲಾ ಅವರು ಸಭೆಯಲ್ಲಿ ಭಾಗವಹಿಸುವ ನಾಯಕರಿಗೆ ಸೂಕ್ತ ವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ
ನಾಳೆಯಿಂದ ಎರಡು ದಿನಗಳ ಕಾಲ ನಡೆಯಲಿರುವ ಈ ಮಹಾ ಮೈತ್ರಿಕೂಟ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೆಹಲಿ ಸಿಎಂ ಅರವಿಂದ ಕೆಜಿ ವಾಲ್ ಬಿಹಾರ ಸಿಎಂ ನಿತೀಶ್ ಕುಮಾರ್ ಏನ್ ಸಿ ಪಿ ಮುಖ್ಯಸ್ಥ ಶರತ್ ಪವಾರ್ ಸೇರಿದಂತೆ ಸುಮಾರು 40ಕ್ಕೂ ಅಧಿಕ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ