ನವದೆಹಲಿ :ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಇಳಿಸಿದ್ದು, 19ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ (99.75 ರೂಪಾಯಿ) ಅಂದಾಜು 100 ರೂಪಾಯಿ ಇಳಿಕೆಯಾಗಿದೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು ಜುಲೈನಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ತೆರಿಗೆಗಳನ್ನು ಅವಲಂಬಿಸಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಇದು ಬದಲಾಗುವ ಸಾಧ್ಯತೆ ಇದೆ.
ಹಾಲಿ ವರ್ಷದ ಮಾರ್ಚ್ 1 ರಿಂದ 14.2 ಕೆಜಿ ಎಲ್‌ಪಿಜಿ ಗೃಹಬಳಕೆಯೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗಿತ್ತು. ರಾಜ್ಯ ನಡೆಸುವ ತೈಲ ಮಾರುಕಟ್ಟೆ ಕಂಪನಿಗಳು ಸಾಮಾನ್ಯವಾಗಿ ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಬೆಲೆಗಳನ್ನು ಪರಿಷ್ಕರಿಸುತ್ತವೆ. ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿ ದೇಶೀಯ ಅಡುಗೆ ಅನಿಲದ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ದೇಶೀಯ ಎಲ್‌ಪಿಜಿ ಬೆಲೆಗಳ ಮೇಲೆ ಪರಿಣಾಮ ಬೀರುತ್ತವೆ. ಇಂದಿನಿAದಲೇ ಹೊಸ ದರಗಳು ಅನ್ವಯವಾಗಲಿದೆ.