ಹೊಸಕೋಟೆ: ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಸಲುವಾಗಿ ಶಾಸಕರ ಒಂದು ವರ್ಷದ ಅನುದಾನ ಕಡಿತಗೊಳಿಸುವಲ್ಲಿ ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಗ್ಯಾರಂಟಿ ಅನುಷ್ಠಾನದ ದೃಷ್ಠಿಯಿಂದ ಒಂದು ವರ್ಷ ಶಾಸಕರಿಗೆ ಅಭಿವೃದ್ಧಿಗೆ ಅನುದಾನ ಕೊಡಲಿಕ್ಕೆ ಆಗಲ್ಲ ಎಂದು ಡಿಸಿಎಂ ಡಿಕೆ.ಶಿವಕುಮಾರ್ ಅವರು ಹೇಳಿಕೇ ನೀಡಿದ್ದು ಇದರಿಂದ ರಸ್ತೆ,ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಿಲ್ಲ ಎಂದಿದ್ದಾರೆ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಅನುಷ್ಠಾನಕ್ಕೆ ಈ ರೀತಿ ಅನುದಾನ ಕಡಿತಗೊಳಿಸುವುದು ಸರಿಯಲ್ಲ ಎಂದು ಎಂಟಿಬಿ ನಾಗರಾಜ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜನರಿಗೆ ಗ್ಯಾರಂಟಿ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಗ್ಯಾರಂಟಿಗಳಿಗಾಗಿ ಜನರ ಮೂಲಸೌಕರ್ಯಗಳನ್ನು ಮೊಟಕುಗೊಳಿಸುವುದು ಸರಿಯಲ್ಲ ಆದ್ದರಿಂದ ಶಾಸಕರ ಕ್ಷೇತ್ರಾಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ