ಕಾರ್ಕಳ: ಜೆ ಸಿ ಐ ಕಾರ್ಕಳ ರೂರಲ್ ಇದರ ಮಾಜಿ ಅಧ್ಯಕ್ಷರಾದ ಶೋಭಾ ಭಾಸ್ಕರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಜೆಸಿಐ ಶಂಕರ್ ನಾರಾಯಣ ಘಟಕದ ವತಿಯಿಂದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಜುಲೈ 23ರಂದು ಈ ಕಾರ್ಯಕ್ರಮ ನಡೆಯಲಿದ್ದು ಜೆ ಸಿ ಐ ಭಾರತದ ವಲಯ 15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು.