ಹಾವೇರಿ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಈ ಕುರಿತಂತೆ ಪ್ರಮೋದ್ ಮುತಾಲಿಕ್ ಅವರು ಸ್ಪಷ್ಟನೆ ನೀಡಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಅಭ್ಯಾಸ ವರ್ಗದಲ್ಲಿ ಸಂಘಟನೆಯಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಲಾಗಿದೆ ಎಂದು ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.
ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ತಾನು ರಾಜೀನಾಮೆ ನೀಡಿಲ್ಲ ಬದಲಾಗಿ ರಾಷ್ಟ್ರೀಯ ಗೌರವಾಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮೀಜಿಯವರನ್ನು ನೇಮಕ ಮಾಡಲಾಗಿದೆ ಅಲ್ಲದೇ ರಾಜ್ಯ ಕಾರ್ಯಧ್ಯಕ್ಷರಾಗಿದ್ದ ಗಂಗಾಧರ್ ಕುಲಕರ್ಣಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಶಿಗ್ಗಾವಿಯಲ್ಲಿ ಕಳೆದ ಕಳೆದ ಮೂರು ದಿನಗಳ ಕಾಲ ಸಂಘಟನೆಯ ಅಭ್ಯಾಸ ವರ್ಗ ಹಮ್ಮಿಕೊಳ್ಳಲಾಗಿತ್ತು ಈ ಶಿಬಿರಕ್ಕೆ ರಾಜ್ಯದ 25 ಜಿಲ್ಲೆಗಳಿಂದ 180 ಕಾರ್ಯಕರ್ತರು ಭಾಗವಹಿಸಿದ್ದರು ಅಭ್ಯಾಸ ವರ್ಗದ ಕೊನೆಯಲ್ಲಿ ಶ್ರೀರಾಮ ಸೇನೆಯ ವಿವಿಧ ಹುದ್ದೆಗಳ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮುತಾಲಿಕ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನುವ ಊಹಾಪೋಗಳಿಗೆ ಅವರು ತೆರೆ ಎಳೆದಿದ್ದಾರೆ.