ಯಾದಗಿರಿ: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಜಾರಿಯಿಂದ ಕೆಲ ಸರ್ಕಾರಿ ನೌಕರರಿಗೆ ಸಂಬಳ ಆಗದೆ ಪರದಾಡುವಂತಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಇನ್ನೂ ಕಳೆದ ತಿಂಗಳ ಸಂಬಳವೇ ಆಗಿಲ್ಲ. ಸಂಬಳ ಆಗದಿರುವುದಕ್ಕೆ ಸಾರಿಗೆ ನೌಕರರು ಯಾದಗಿರಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ರಾಜ್ಯ ಸಾರಿಗೆ ನೌಕರರ ಸಂಘದಿAದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕರು ಸೇರಿ ಹಲವರಿಂದ ಪ್ರತಿಭಟನೆ ನಡೆಯಿತು. ಸಮಯಕ್ಕೆ ಸರಿಯಾಗಿ ಸಂಬಳ ನೀಡುವಂತೆ ಪ್ರತಿಭಟನಾಕಾರರು ಸರಕಾರವನ್ನು ಒತ್ತಾಯಿಸಿದರು.
ಶಕ್ತಿ ಯೋಜನೆಯನ್ನು ನಾವು ಯಶಸ್ವಿಗೊಳಿಸಿದ್ದೇವೆ, ಆದರೆ ನಮಗೆ ಸಂಬಳ ಬರುತ್ತಿಲ್ಲ. ಶಕ್ತಿ ಯೋಜನೆ ಆರಂಭವಾದಾಗಿನಿAದ ನಮಗೆ ಸಂಬಳ ನೀಡುವಲ್ಲಿ ವಿಳಂಬ ಆಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.