ಕಾರ್ಕಳ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಗ್ರಾಮದ ಕಾನಂಗಿ ಕ್ರಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ
ಬೈಕ್ ಸವಾರ ಹಿರ್ಗಾನ ಗ್ರಾಮದ ಹಾರ್ಜೆಡ್ಡು ನಿವಾಸಿ ಅಜಯ್( 18) ಎಂದು ತಿಳಿದುಬಂದಿದೆ.
ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಅಜಯ್ ತನ್ನ ಬೈಕಿನಲ್ಲಿ ಕಾರ್ಕಳ ಕಡೆಯಿಂದ ಮನೆಗೆ ಹೋಗುತ್ತಿದ್ದಾಗ ಹೆಬ್ರಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಇನ್ನೊಬ್ಬ ಕಾರ್ ಡಿಕ್ಕಿಯಾಗಿದೆ.
ಡಿಕ್ಕಿ ರಭಸಕ್ಕೆ ಅಜಯ್ ಚಲಾಯಿಸುತ್ತಿದ್ದ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಸವಾರ ಅಜಯ್ ಅವರಿಗೆ ತೀವ್ರ ಗಾಯಗಳಾಗಿವೆ