Share this news

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಕಳೆದ 8-9 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಗಲು-ರಾತ್ರಿ, ಬಿಸಿಲು, ಚಳಿ ಎನ್ನದೆ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಬೇಡಿಕೆಗಳನ್ನುö ಈಡೇರಿಸದಿದ್ದಲ್ಲಿ ನಾಳೆ ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.


ನಮ್ಮ ಮೇಲೆ ಲಾಠಿ ಚಾರ್ಜ್, ಗೋಲಿಬಾರ್ ಆದರೂ ನಾವು ಪ್ರತಿಭಟನೆ ನಿಲ್ಲಿಸುವುದಿಲ್ಲ, ಯಾವತ್ತೋ ಒಂದು ದಿನ ಸಾಯಬೇಕು, ನಾಳೆಯೇ ಸತ್ತರೆ ಏನೂ ಆಗೊಲ್ಲ. ಸತತ 9 ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ. ನಮ್ಮ ಹೋರಾಟದ ಕೂಗು ಸರ್ಕಾರದ ಕಿವಿಗೆ ಬಿದ್ದಿಲ್ಲ. ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಆಗಬೇಕು. ಇಲ್ಲವಾದರೆ ನಾಳೆ 15 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಸಿಎಂ ಮನೆ ಮುತ್ತಿಗೆ ಹಾಕುತ್ತೇವೆ ಎಂದು ಸಿಐಟಿಯು ಸಂಘಟನೆಯ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಎಚ್ಚರಿಕೆ ನೀಡಿದ್ದಾರೆ.

ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಸಿಐಟಿಯು ಸಂಘಟನೆಯಿAದ ಫ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಗಲು ರಾತ್ರಿ ಎನ್ನದೆ ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಮಹಿಳೆಯರು ತಮ್ಮ ಪುಟ್ಟ ಕಂದಮ್ಮಗಳನ್ನು ಜೊತೆಗೆ ಕರೆತಂದಿದ್ದು, ಸರಿಯಾದ ಊಟದ ವ್ಯವಸ್ಥೆ, ಶೌಚಾಲಯ, ನೀರಿನ ವ್ಯವಸ್ಥೆ ಇಲ್ಲದೆ ತೀವೃ ಚಳಿಯ ನಡುವೆ ಆರೋಗ್ಯ ಹದಗೆಟ್ಟು ತೀವೃ ಸಂಕಷ್ಟ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *