ಉಡುಪಿ: ಶಿಕ್ಷಕ, ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಸಾಧನೆ ಮಾಡಿದ್ದ ಸಾಹಿತಿ, ಯಕ್ಷಗಾನ ಕಲಾವಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ (88) ಅವರು ಇಂದು ನಿಧನ ಹೊಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.
ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ ಅವರ ನಿಧನದಿಂದ ಅತೀವ ಬೇಸರವಾಗಿದೆ. ಅವರ ಅಗಲಿಕೆ ಕರ್ನಾಟಕದ ಕಲೆ ಹಾಗೂ ಸಾಂಸ್ಕೃತಿಕ ರಂಗಕ್ಕೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದು ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದರು.