Share this news

ಬೆಂಗಳೂರು:ದೀಪಾವಳಿಯಂದು ಮನೆಗೆ ದೀಪಾಲಂಕಾರಕ್ಕಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿದ್ಯುತ್ ಕಂಬದಿಂದಲೇ ಅಕ್ರಮ ಸಂಪರ್ಕ ಪಡೆದಿದ್ದರು. ಈ ಮೂಲಕ ಅಕ್ರಮವಾಗಿ ವಿದ್ಯುತ್ ಬಳಕೆ ಮಾಡಿದ್ದರು.ಈ ಕುರಿತು ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ, ಅದನ್ನು ಖಚಿತ ಪಡಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಬೆಸ್ಕಾಂ ಅಧಿಕಾರಿಗಳು ಮಾಜಿ ಸಿಎಂ ಹೆಚ್ ಡಿಕೆಗೆ ಬರೋಬ್ಬರಿ 68 ಸಾವಿರ ದಂಡ ವಿಧಿಸಿದ್ದಾರೆ.
ಮಾಜಿ ಸಿಎಂ ಎಚ್ ​ಡಿ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರದ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ವಿದ್ಯುತ್ ಕಳ್ಳತನ ಮಾಡಿರುವುದಕ್ಕೆ ಬೆಸ್ಕಾಂ ದಂಡ ವಿಧಿಸಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಅಕ್ರಮವಾಗಿ ವಿದ್ಯುತ್‌ ಬಳಸಿಕೊಂಡಿದ್ದಾರೆ ಎಂದು ವಿಡಿಯೋ ಸಮೇತ ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಜಯನಗರದ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ತೆರಳಿ ಪರಿಶೀಲನೆ ಮಾಡಿ, ಬಳಿಕ ಅವರ ವಿರುದ್ಧ ಎಫ್​ಐಆರ್ ಕೂಡ ದಾಖಲಿಸಿದ್ದರು.

ಬೆಸ್ಕಾಂ ಜಾಗೃತಾ ದಳದ ಡಿವೈಎಸ್‌ಪಿ ಅನುಷ ನೇತೃತ್ವದಲ್ಲಿ ವಿದ್ಯುತ್ ಬಳಕೆ ಕೌಂಟಿಂಗ್ ಮಾಡಿ, 10 ನಿಮಿಷಕ್ಕೆ​ ಎಷ್ಟು ವಿದ್ಯುತ್ ಬಳಕೆ ಆಗುತ್ತದೆ ಎನ್ನುವುದನ್ನು ಲೆಕ್ಕ ಮಾಡಿ, ಎರಡು ದಿನ ಎಷ್ಟು ಬಳಕೆ ಆಗಿದೆ ಎಂಬುದರ ಲೆಕ್ಕದ ಮೇಲೆ ನ.14 ರಂದು ಅಧಿಕಾರಿಗಳು ವರದಿ ನೀಡಿದ್ದರು. ಆ ಪ್ರಕಾರ ಇದೀಗ ಬೆಸ್ಕಾಂ ಇಲಾಖೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ 68 ಸಾವಿರ ರೂ. ದಂಡವನ್ನು ವಿಧಿಸಿದ್ದು, 7 ದಿನಗಳೊಳಗಾಗಿ ದಂಡ ಪಾವತಿಸುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *