ಕಾರ್ಕಳ: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದ ವಸಂತ (53) ಎಂಬವರು ಎದೆನೋವು ಉಲ್ಬಣಿಸಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ.
ಮಂಗಳವಾರ ಸಂಜೆ 6 ಗಂಟೆಗೆ ಸುಮಾರಿಗೆ ಮನೆಯಲ್ಲಿರುವ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.ಕೂಡಲೇ ಸ್ಥಳೀಯರಾದ ಹರೀಶ ಎಂಬವರು ವಸಂತ ಅವರನ್ನು ಚಿಕಿತ್ಸೆಗೆ ಕಾರ್ಕಳದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,ಅದಾಗಲೇ ವಸಂತ ಮೃತಪಟ್ಟಿದ್ದರು.
ಈ ಕುರಿತು ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ